ಗದಗ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿಎಂ.ಎಲ್‌ ಅವರು ಇಂದು ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರ ಹಾಗೂ ಶೆಟ್ಟಿಹಳ್ಳಿ ಗ್ರಾಮಗಳಲ್ಲಿ‌ ಮಳೆಯಿಂದಾದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಸರ್ಕಾರದ‌ ಮಾರ್ಗ ಸೂಚಿಗಳನ್ವಯ ಪರಿಹಾರ ವಿತರಣೆಗೆ ತ್ವರಿತ ಕ್ರಮ‌ಕೈಗೊಳ್ಳಬೇಕು. ಮಾನವ, ಜಾನುವಾರು ಜೀವ ಹಾನಿಯಾದಲ್ಲಿ ಕೂಡಲೇ ಸಂತ್ರಸ್ಥ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು.ಅಧಿಕಾರಿ ಸಿಬ್ಬಂದಿಗಳು ಹಾನಿ ಪ್ರದೇಶಗಳಿಗೆ ಕೂಡಲೇ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ತದ ನಂತರ ಲಕ್ಷ್ಮೇಶ್ವರ ಪಟ್ಟಣದ ಪ್ರದಕ್ಷಿಣೆ ನಡೆಸಿ ಚರಂಡಿ ನೀರು ಸರಾಗವಾಗಿ ಸಾಗಲು ಅನುಕೂಲವಾಗುವಂತೆ ಚರಂಡಿಗಳ ಸ್ವಚ್ಛತೆಗೆ ಆಧ್ಯತೇ ನೀಡುವಂತೆ ತಿಳಿಸಿದ ಅವರು ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜ್ಯನ್ಯದೊಂದಿಗೆ ವರ್ತಿಸುವದರ ಮೂಲಕ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಹಶೀಲ್ದಾರ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸೂಚನೆ ನೀಡಿದರು.

ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ತಹಶೀಲ್ದಾರ ಪರಶುರಾಮ ಸತ್ತಿಗೆರಿ ಸೇರಿದಂತೆ ಕಂದಾಯ ನೀರಿಕ್ಷಕರು, ಗ್ರಾಮ‌ ಲೆಕ್ಕಾಧಿಕಾರಿಗಳು ಹಾಜರಿದ್ದರು.