ಗದಗ:  ನೇತ್ರದಾನಕ್ಕೆ ಒಪ್ಪಿಗೆ ಸೂಚಿಸಿದ  ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಬಿ ಅವರು ತಮ್ಮ ಒಪ್ಪಿಗೆ ಪತ್ರವನ್ನು  ಮಂಗಳವಾರದಂದು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಗದೀಶ ನುಚ್ಚಿನ ಹಾಗೂ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ರಾಜೇಂದ್ರ ಬಸರಿಗಿಡದ ಇವರಿಗೆ ಹಸ್ತಾಂತರಿಸಿದರು.

ಅಗಸ್ಟ 25 ರಿಂದ ಸೆಪ್ಟೆಂಬರ್ 8 ರವರೆಗೆ  37ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ನೇತ್ರದಾನ ನೋಂದಣೆ ಶಿಬಿರಗಳನ್ನು ಆಯೋಜಿಸಲಾಗಿದೆ.


ಸಮೀಪದ ಸರಕಾರಿ ಆಸ್ಪತ್ರೆಗಳಲ್ಲಿ ಅಥವಾ 24*7 ಉಚಿತ ಸಹಾಯವಾಣೆ104.ರಾಷ್ಟ್ರೀಯ ಸಹಾಯವಾಣೆ 1800-11-4770ಕ್ಕೆ ಕರೆ ಮಾಡಿ ನೇತ್ರದಾನ ಮಾಡಿಕೊಳ್ಳಬಹುದು. ವೆಬ್‍ಸೈಟ್‍ನಲ್ಲಿ ನೋಂದಣೆ  ಜಿವಸಾರ್ಥಕ ವೆಬ್‍ಸೈಟ್   https://www.jeevasarthakathe.karnataka.gov.in  ಮೂಲಕ ಸಹ ಸುಲಭದಲ್ಲಿ ನೋಂದಣೆ ಮಾಡಬಹುದು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಗದೀಶ ನುಚ್ಚಿನ ಮಾತನಾಡಿ ನೇತ್ರ ನೋಂದಣೆ ಮತ್ತು ವಿತರಣೆ ಉಚಿತ ಸೇವೆ ನೇತ್ರ ಸಂಗ್ರಹಣೆಗೆ ಬೇಕಾಗುವ ಸಮಯ ಕೇವಲ 20 ನಿಮಿಷಗಳು. ನೇತ್ರ ಸಂಗ್ರಹಣೆಯ ನಂತರ ಮೃತರ ಮುಖ ವಿಕಾರವಾಗುವುದಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ರಾಜೇಂದ್ರ ಬಸರಿಗಿಡದ ಮಾತನಾಡಿ, ನೇತ್ರದಾನ ಮಾಡುವುದು ಮರಣಾ ನಂತರವೇ .  ನಮ್ಮ ನೇತ್ರಗಳು ಸದಾ ಜೀವಂತವಾಗಿರಲು ಜಿಲ್ಲೆಯ ಎಲ್ಲರೂ ನೇತ್ರದಾನಕ್ಕೆ ನೋಂದಣೆ ಮಾಡಬೇಕೆಂದು ತಿಳಿಸಿದರು.

ಅಂದಾಜು 1.25 ಲಕ್ಷ ಜನರು ಕಾರ್ನಿಯಾ ಸಂಬಂದಿ ಅಂಧತ್ವದಿಂದ ಬಳಲುತ್ತಿದ್ದಾರೆ ದಾನಕ್ಕಾಗಿ ಕಾಯುತ್ತಿರುತ್ತಾರೆ. ಒಬ್ಬ ವ್ಯಕ್ತಿ ದಾನ ಮಾಡಿದ ನೇತ್ರಗಳು ಇಬ್ಬರು ಕಾರ್ನಿಯಾ ಅಂಧರಿಗೆ ದೃಷ್ಟಿ ಮರಳಿ ನೀಡುತ್ತದೆ. ತಮ್ಮ ಹಾಗೂ ಕುಟುಂಬದವರ ನೇತ್ರದಾನಕ್ಕೆ ನೋಂದಾಯಿಸಬೇಕೆಂದು ತಿಳಿಸಿದರು.  ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ನೇತ್ರಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.