ಚಾಮರಾಜನಗರ
ಜಿಲ್ಲೆಯ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ತೆರಳುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಹಾಗೂ 6 ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ರವರೆಗೆ ನಿರ್ಬಂಧಿಸಿ ಜಿಲ್ಲಾಕಾರಿ ಚಾರುಲತಾ ಸೋಮಲ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರು, ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳು, ಅಗ್ನಿಶಾಮಕ ವಾಹನ, ಅಂಬುಲೆನ್ಸ್ ವಾಹನ, ರಾಜ್ಯ ಹಾಗೂ ಹೊರರಾಜ್ಯದ ಸಾರ್ವಜನಿಕ ವಾಹನಗಳಾದ ಸರಕಾರಿ, ಖಾಸಗಿ ಬಸ್‌ಗಳು, ಸರಕಾರಿ ಇತರೆ ಎಲ್ಲಾ ರೀತಿಯ ಲಘು ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶರುತ್ತದೆ ಎಂದು ಜಿಲ್ಲಾಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 209ರ ಸತ್ಯಮಂಗಲ ಹುಲಿ ಯೋಜನೆ ದಿಂಬಂ ಘಟ್ಟ ಪ್ರದೇಶದ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಸಿ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ಹಾಗಾಗಿ ಆ ವಾಹನಗಳು ರಾತ್ರಿ ವೇಳೆಯಲ್ಲಿ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಮತ್ತು ಮಲೆ ಮಹದೇಶ್ವರ ಬೆಟ್ಟದಿಂದ ಪಾಲಾರ್‌ವರೆಗಿನ ರಸ್ತೆಯು ಕಡಿದಾದ ತಿರುನಿಂದ ಕೂಡಿದ್ದು ಹಾಗೂ ಚಿಕ್ಕದಾಗಿರುವುದರಿಂದ ಭಾರಿ ವಾಹನಗಳ ಸಂಚಾರದಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿದೆ
.
ಇದರಿಂದ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳ, ಸಾರ್ವಜನಿಕರ, ಸರಕಾರ ಹಾಗೂ ತುರ್ತು ವಾಹನಗಳ ಸುಗಮ ಸಂಚಾರವು ಕಷ್ಟ ಸಾಧ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನಗಳ ಕಾಯಿದೆ 1988ರ ಸೆಕ್ಷನ್ 115, ಕರ್ನಾಟಕ ಮೋಟಾರು ವಾಹನಗಳ ನಿಯಾಮಾವಳಿ-1989ರ ನಿಯಮ 221-ಎ(5)ರ ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯಿದೆ 1960ರ ಸೆಕ್ಷನ್ 3ರ ಪ್ರಕಾರ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತುಳುನಾಡಿಗೆ ಹೋಗುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಸಿ ಹಾಗೂ 6 ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನಿರ್ಬಂಧಿಸಿದೆ ಎಂದು ಜಿಲ್ಲಾಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈಕುರಿತು ವಿಚಾರ ಚರ್ಚೆಯಾಗಿತ್ತು. ಹೀಗಾಗಿ ಸಚಿವರು ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರ ಬಂದಿದೆ.