ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಗ್ರಾಮದಲ್ಲಿ ಭಾನುವಾರ‌ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗುತ್ತಿದ್ದಂತೆ ಮೂರು ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಮೂಡಿಗೇರೆ ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ಜೀವಹಾನಿ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆ ಸೆರೆಗೆ ಮುಂದಾಗಿದೆ.

ಇದನ್ನೂ ಓದಿ; ಕಾಡಾನೆ ದಾಳಿಗೆ ಮಹಿಳೆ ಬಲಿ https://emadhyama.com/2022/11/20/elephant-attacked-in-mudigere/

ಕಾಡಾನೆ ದಾಳಿಯಿಂದ ಜನ ಆಕ್ರೋಶಗೊಂಡಿದ್ದರು. ಅರಣ್ಯ ಇಲಾಖೆ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಅಸಮಾಧಾನಗೊಂಡಿದ್ದರು. ಜನರ ಆಕ್ರೋಶಕ್ಕೆ ಮಣಿದು ಸರಕಾರ ಆನೆಗಳ ಸೆರೆಗೆ ಮುಂದಾಗಿದೆ.

ಈ ಕುರಿತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ನವೆಂಬರ್ 21ರಂದು ಆದೇಶ ಹೊರಡಿಸಿದ್ದು, ಆಲ್ದೂರು/ ಮೂಡಿಗೇರೆ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಸೆರೆಹಿಡಿಯುವಂತೆ ಆದೇಶಿಸಿದ್ದಾರೆ.