ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ಸಿನ ಹಾಲಿ, ಮಾಜಿ ಶಾಸಕರಿಗೆ ಬೆಂಬಲಿಸಿ ಎಂದಿರಬಹುದು. ಟಿಕೆಟ್ ಹಂಚಿಕೆ ಏನಿದ್ದರೂ ಹೈಕಮಾಂಡ್ ನಿರ್ಣಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಸೋಮವಾರ ಶಾಸಕ ರಾಘವೇಂದ್ರ ಹಿಟ್ನಾಳ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡಿದ್ದಾರೆ ಎನ್ನುವ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.
ಕಾಂಗ್ರೆಸ್‌ನಲ್ಲಿ ಸಾಮಾನ್ಯವಾಗಿ ಹಾಲಿ, ಮಾಜಿ ಶಾಸಕರಿಗೆ ಟಿಕೆಟ್ ಕೈತಪ್ಪುವುದು ಕಡಿಮೆ. ಹೀಗಾಗಿ ಸಹಜವಾಗಿ ಇಂಥವರನ್ನು ಬೆಂಬಲಿಸಿ ಎಂದು ಸಿದ್ದರಾಮಯ್ಯ ಹೇಳಿರಬಹುದು. ಆದರೆ ಟಿಕೆಟ್ ಹಂಚಿಕೆ ನಿರ್ಧಾರ ಮಾಡುವುದು ಹೈಕಮಾಂಡ ಎಂದು ಸ್ಪಷ್ಟಪಡಿಸಿದರು.
ಸುಳ್ಳಿನ ಸರದಾರ
ಚಕ್ರವರ್ತಿ ಸೂಲಿಬೆಲೆ ಒಬ್ಬ ಸುಳ್ಳಿನ ಸರದಾರ. ಆತನ ಮಾತಿಗೆ ಬೆಲೆ ಕೊಡುವ ಅಗತ್ಯವಿಲ್ಲ. ನಾನು ಬಳಸಿದ ಪದ ಹಾಗೂ ವಿರೋಧಿಗಳ ಪ್ರಶ್ನೆಗೆ ಈಗಾಗಲೇ ಉತ್ತರ ಕೊಟ್ಟಿರುವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.