ಬೆಂಗಳೂರು: ರಾಜ್ಯದಲ್ಲಿ ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳ ವರ್ಗಾವಣೆ ನಂತರ ಪಿಎಸ್ಐಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ನವಂಬರ್ 28ರಂದು ಏಕಕಾಲಕ್ಕೆ 108 ಪಿಎಸ್ಐ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಅವರ ಪರವಾಗಿ ಐಎಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಈ ಆದೇಶ ಮಾಡಿದ್ದಾರೆ.

ವರ್ಗಾವಣೆ ಮತ್ತು ನಿಯತ್ತಿಗೊಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೇ, ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.