ಕೊಪ್ಪಳ: ದುಡ್ಡಿದ್ದವರನ್ನು, ರೌಡಿಗಳನ್ನು, ಗೂಂಡಾಗಳನ್ನು ಪಕ್ಷದೊಳಗೆ ಸೇರಿಸಿಕೊಳ್ಳಲಾಗುತ್ತಿದೆ. ತ್ಯಾಗ, ಬಲಿದಾನ, ಶ್ರಮವಹಿಸಿದ ಹಿಂದೂ ಪ್ರಖರ ಕಾರ್ಯಕರ್ತರು ನಿಮಗೆ ಕಾಣುತ್ತಿಲ್ಲ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಆರೋಪಿಸಿದರು.

ಜಿಲ್ಲೆಯ ಅಂಜನಾದ್ರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ‌ಬಅವರು,  ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಸಿದ್ದಲಿಂಗಶ್ರೀ ಹಾಗೂ ನಾನು ರಾಜಕೀಯ ಪ್ರವೇಶ ನಿರ್ಧಾರ ಮಾಡಿದರೆ ಬಿಜೆಪಿಗರಿಗೆ‌ ಅದು ಕಾಣುವುದಿಲ್ಲ. ಈ ಬಾರಿ ಹಿಂದೂ ಸಂಘಟನೆಗಳ ಒಕ್ಕೂಟದಿಂದ 25 ಪ್ರಖರ ಹಿಂದೂವಾದಿ ಅಭ್ಯರ್ಥಿಗಳನ್ನು ಕಣಕ್ಕಿಸುತ್ತೇವೆ ಎಂದು ಹೇಳಿದರು.

ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ಕೊಟ್ಟಿದ್ದಕ್ಕೆ ಸರಕಾಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಅಂಜನಾದ್ರಿಯನ್ನು ಚುನಾವಣೆ ಹಿನ್ನೆಲೆಯಲ್ಲಿ ಅಭಿವೃದ್ಧಿ ಮಾಡದೆ ಧಾರ್ಮಿಕ, ರಾಷ್ಟ್ರೀಯತೆ ಹಿನ್ನೆಲೆಯಲ್ಲಿ ಅಭಿವೃದ್ದಿ ಮಾಡಬೇಕು ಎಂದರು.