ರಾಮನಗರ: ಸಚಿವ ಆನಂದ ಸಿಂಗ್ ಪ್ರತ್ಯೇಕ ಉತ್ತರ ಕರ್ನಾಟಕ ಹೇಳಿಕೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಆನಂದ್ ಸಿಂಗ್ ಹೇಳಿಕೆ ಅವರ ಕ್ಷುಲಕ ಮನಸ್ಥಿತಿ ತೋರಿಸುತ್ತದೆ ಎಂದು ಹೇಳಿದ್ದಾರೆ.

ಆನಂದ ಸಿಂಗ್ ಸಚಿವರಾಗಿ ಏನು ಸಾಧನೆ ಮಾಡಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಿ ಏನು ಕೊಳ್ಳೆ ಹೊಡೆಯಲು ಹೊರಟಿದ್ದಾರೆ. ಕ್ಷುಲ್ಲಕ ಮನಸ್ಥಿತಿ ಅವರ ಮಾತಿಗೆ ಮನ್ನಣೆ ನೀಡಬಾರದು ಎಂದಿದ್ದಾರೆ.

2018 ರ ಚುನಾವಣೆಯಲ್ಲಿ ಜೆಡಿಎಸ್ ಕಾರ್ಯಕ್ರಮಳನ್ನು ಜಾರಿಗೆ ತರದಿದ್ದರೆ ಪಕ್ಷ ವಿರ್ಸಜಿಸುತ್ತೇನೆ ಎಂದು ನಾನು ಹೇಳಿರುವುದಿಲ್ಲ. ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಾಗ ಜಾರಿಗೊಳಿಸದಿದ್ದರೆ ರಾಜಕೀಯದಿಂದ ನಿವೃತ್ತಿ ಆಗುತ್ತಾನೆ ಎಂದಿದ್ದಾರೆ.

ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದಾಗ ರಾಜ್ಯ ಸಂಪದ್ಭರಿತವಾಗಿ ದೇಶಕ್ಕೆ ಮಾದರಿಯಾಗಲಿದೆ. ಆ ಕಾರಣಕ್ಕಾಗಿ ಪಂಚರತ್ನ ಕಾರ್ಯಕ್ರಮ ‌ಮುಂದಿಟ್ಟುಕೊಂಡು ಹೋರಾಟ ಆರಂಭಿಸಿರುವುದಾಗಿ ತಿಳಿದಿದ್ದಾರೆ.