ನವದೆಹಲಿ: ಬೆರಳಿನ ಗಾಯದಿಂದ ಪ್ರಥಮ ಟೆಸ್ಟ್ ಗೆ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿದ್ದರು. ಸದ್ಯ ಗಾಯದಿಂದ ಚೇತರಿಕೆ ಕಂಡಿರುವ ಹಿನ್ನೆಲೆಯ್ಲಿ ದ್ವಿತೀಯ ಟೆಸ್ಟ್ ಗೆ ರೋಹಿತ್ ಶರ್ಮಾ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.
ರೋಹಿತ್ ಅನುಪಸ್ಥಿತಿಯಲ್ಲಿ ಪ್ರಥಮ ಟೆಸ್ಟ್ ನಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ತಂಡವನ್ನು ಮುನ್ನೆಡೆಸಿದ್ದರು. ಮಿರ್ ಪುರ್ ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ನಲ್ಲಿ ರೋಹಿತ್ ಕಣಕ್ಕಿಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.
ರೋಹಿತ್ ಶರ್ಮಾ ಫಿಟ್ನೆಸ್ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಎರಡನೇ ಟೆಸ್ಟ್ ಗೆ ಲಭ್ಯವಾಗುವ ಸಾಧ್ಯತೆಗಳಿವೆ. ರೋಹಿತ್ ಶುಕ್ರವಾರ ಅಥವಾ ಶನಿವಾರ ಬಾಂಗ್ಲಾದೇಶಕ್ಕೆ ತೆರಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿದೆ. ರೋಹಿತ್ ಫಿಟ್ ಇರುವುದಾಗಿ ಟೀಮ್ ಮ್ಯಾನೇಜ್‌ಮೆಂಟ್‌ಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ
ಶುಭಮನ್ ಗಿಲ್ ಶತಕ
ಚಿತ್ತಗಾಂಗ್ ನಲ್ಲಿ ನಡೆಯುತ್ತಿರುವ ಭಾರತ- ಬಾಂಗ್ಲಾ ಟೆಸ್ಟ್ ನಲ್ಲಿ ಶುಭಮನ್ ಗಿಲ್ ಚೊಚ್ಚಲ ಶತಕ ಬಾರಿಸಿದ್ದಾರೆ. ಪ್ರಥಮ ಟೆಸ್ಟ್ ನ ದ್ವೀತಿಯ ಇನ್ನಿಂಗ್ಸ್ ನಲ್ಲಿ ಆರಂಭಿಕ ಆಟಗಾರ ಗಿಲ್ ಶತಕ ದಾಖಲಿಸಿದ್ದಾರೆ.
ಪ್ರಥಮ ಇನ್ನಿಂಗ್ಸ್ ನಲ್ಲಿ ಬಾಂಗ್ಲಾ ಪಡೆ 150 ರನ್ ಗಳಿಗೆ ಸರ್ವಪತನ ಕಂಡಿದೆ. ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಭಾರತ 2 ವಿಕೆಟ್ ನಷ್ಟಕ್ಕೆ 245 ರನ್ ಕಲೆ ಹಾಕಿದೆ. ಚೆತೇಶ್ವರ ಪೂಜಾರ(91) ಶತಕದತ್ತ ದಾಪುಗಾಲಿಟ್ಟಿದ್ದಾರೆ.