ಬೆಂಗಳೂರು: ರಾಜ್ಯದ 93 ವಿಧಾನಸಭಾ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ..ಇಬ್ರಾಹಿಂ ಬಿಡುಗಡೆ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಹಾಲಿ ಆರು ಮಂದಿ ಶಾಸಕರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಅದೇ ರೀತಿ ಕೆ.ಆರ್.ಪೇಟೆ ಕ್ಷೇತ್ರಕ್ಕೆ ಎಚ್.ಟಿ. ಮಂಜು ಅವರಿಗೆ ಟಿಕೆಟ್ ಘೋಷಣೆ ಮಾಡುವ ಮೂಲಕ ಹೊಸಬರಿಗೂ ಮಣೆ ಹಾಕಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ನಡೆದ ಪಂಚರತ್ನ ಸಮಾವೇಶದಲ್ಲಿ ಕುಮಾರಸ್ವಾಮಿ ಅವರು ಸೋಮವಾರ ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದರು. ಅದರಂತೆ ಪಕ್ಷದ ರಾಜ್ಯಾಧ್ಯಕ್ಷ‌ ಸಿ.ಎಂ. ಇಬ್ರಾಹಿಂ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದಾರೆ.