ಬೆಳಗಾವಿ: ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ರಾಜಕೀಯ ನಾಯಕರ ಚಟುವಟಿಕೆಗಳು ಆರಂಭಗೊಂಡಿವೆ. ಬೆಳಗಾವಿ ಅಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಮೊದಲ ದಿನ ರಾತ್ರಿ ಡಿಕೆ ಶಿವಕುಮಾರ್ ರಾತ್ರಿ ರೌಂಡ್ಸ್ ಹೊಡಿದಿದ್ದಾರೆ. ಕೆಪಿಸಿಸಿ ಅಧ್ಯಕ್ಷರಿಗೆ ಜಿಲ್ಲಾ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದಾರೆ.

ರಾಜಕೀಯ ಲೆಕ್ಕಾಚಾರದಲ್ಲಿ ತೊಡಗಿಕೊಂಡಿರುವ ಡಿಕೆಶಿ ಬೆಳಗಾವಿ ರಾಜಕಾರಣದ ಮೇಲೆ ಹಿಡಿತ ಸಾಧಿಸಲು ಭೇಟೆ ಆರಂಭಿಸಿದ್ದಾರೆ. ಮಧ್ಯರಾತ್ರಿ ಕಾರ್ಯಕರ್ತರ ಜೊತೆ ಗುಪ್ತ ಸಭೆಗಳನ್ನು ಮಾಡಿದ್ದಾರೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು, ಕಾಂಗ್ರೆಸ್ ಶಾಸಕಿ ಹಾಗೂ ವಿಧಾನ ಪರಿಷತ್ ಸದಸ್ಯ ಜೊತೆಗೂಡಿ ತಂತ್ರ ರಚಿಸುತ್ತಿದ್ದಾರೆ. 18 ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಹೈ ವೊಲ್ಟೇಜ್ ಕದನ ಕಣ ರೆಡಿಯಾಗಲಿದೆ.