ಬೆಂಗಳೂರು: ನಟ ದರ್ಶನ್ ಅವರು ಚಪ್ಪಲಿ ಎಸೆತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯನ್ನು ಚಂದನವನದ ಕಲಾವಿದರೆಲ್ಲರೂ ಖಂಡಿಸಿದ್ದಾರೆ.
ಈ ಸಮಯದಲ್ಲಿ ನನಗಿಂತಲೂ ನನ್ನ ಸೆಲೆಬ್ರಿಟಿಗಳಿಗೆ ಹೆಚ್ಚು ನೋವಾಗಿದೆ ಎಂಬ ಅರಿವು ನನಗಿದೆ. ಇಂಥ ಘಟನೆಗಳು ಒಬ್ಬ ವ್ಯಕ್ತಿಯನ್ನು ಮತ್ತಷ್ಟು ಬಲಪಡಿಸುತ್ತದೆಯೇ ಹೊರತೂ ಬಲಹೀನನನ್ನಾಗಿ ಮಾಡುವುದಿಲ್ಲ. ಅದಕ್ಕೆ ತಕ್ಕ ಉದಾಹರಣೆಗಳು ನಮ್ಮ ಕನ್ನಡ ನೆಲದಲ್ಲೇ ನೋಡಿದ್ದೇವೆ.
ಈ ಸಮಯದಲ್ಲಿ ನ್ಯಾಯದ ಪರ ನಿಂತ ಪ್ರತಿಯೊಬ್ಬ ಚಿತ್ರರಂಗದ ಗೆಳೆಯರು, ನಟರಿಗೆ ಧನ್ಯವಾದಗಳು. ಈ ಘಟನೆಯನ್ನು ತಪ್ಪು ಹಾದಿಯಲ್ಲಿ ಪ್ರೇರೇಪಿಸಲು ಪ್ರಯತ್ನಿಸಿದ ಕೆಲವರಿಗೂ ಧನ್ಯವಾದಗಳು.
ಮೊದಲಿಂದಲೂ ಹೇಳಿಕೊಂಡು ಬಂದಿದ್ದೇನೆ, ಹಾಳು ಮಾಡೋಕೆ ನೂರು ಜನ ಇದ್ರೆ, ಕಾಯೋಕೆ ನಮ್ಮ ಕೋಟ್ಯಾಂತರ ಸೆಲೆಬ್ರಿಟಿಗಳಿರುತ್ತಾರೆ. ನಿಮ್ಮ ಈ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ, ಎಂದು ಬರೆದುಕೊಂಡಿದ್ದಾರೆ.