ನವದೆಹಲಿ: ಹೊಸ ರೂಪಾಂತರಿ ತಳಿಯಿಂದ ಚೀನಾದಲ್ಲಿ ಊಹೆಗೂ ಮೀರಿ ಕೋವಿಡ್ ಪ್ರಕರಣಗಳು ಹೆಚ್ಚಿವೆ. ಕೋವಿಡ್ ನಿರ್ಬಂಧಗಳನ್ನು ಸಡಿಲಿಕೆ ಮಾಡಿರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗಿದೆ.
ಈಗ ಹೊಸ ರೂಪಾಂತರಿ ತಳಿ ಓಮಿಕ್ರಾನ್ BF7 ಭಾರತಕ್ಕೆ ವಕ್ಕರಿಸಿದೆ. ಗುಜರಾತ್ ನಲ್ಲಿ ಎರಡು, ಒಡಿಶಾದಲ್ಲಿ ಒಂದು ಪ್ರಕರಣ ಪತ್ತೆ ಆಗಿದೆ.
ಈ ರೂಪಾಂತರಿಯಿಂದ ಪಕ್ಕದ ರಾಷ್ಟ್ರ ಚೀನಾದಲ್ಲಿ ಕೋವಿಡ್ ಪ್ರಕರಣಕ್ಕೆ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಚ್ಚೆತ್ತು ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಿದೆ.
ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಆರೋಗ್ಯ ಸಚಿವರು, ಕೇಂದ್ರ ಆರೋಗ್ಯ ಸಚಿವರು ಎಲ್ಲ ರಾಜ್ಯಗಳ ಸಭೆ ಕರೆದಿದ್ದಾರೆ. ದೇಶದಲ್ಲಿ ಮತ್ತೆ ಕೋವಿಡ್ ಭೀತಿ ಎದುರಾಗಿದೆ.
ಈ ಕುರಿತು ಭಯಪಡುವ ಅಗತ್ಯವಿಲ್ಲ, ನಮ್ಮಲ್ಲಿ ರೋಗ ನಿರೋಧಕ ಶಕ್ತಿ ದೃಢವಾಗಿದೆ ಎಂದು ಏಮ್ಸ್ ನ ಮಾಜಿ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ.