ನಾಗ್ಪುರ್: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಭಂದಿಸಿದಂತೆ ಮಹಾ ಸಚಿವ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ಸಿಎಂ ಹಾಗೂ ಸಚಿವರು ಬೇಜವಾಬ್ದಾರಿ ಹೇಳಿಕೆ ನಿಲ್ಲಿಸದಿದ್ದರೆ, ನೀರು ಬಿಡುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕಕ್ಕೆ ಮಹಾರಾಷ್ಟ್ರದ ಆಣೆಕಟ್ಟು ನೀರು ಹರಿಸುವ ಬಗ್ಗೆ ಚಿಂತಿಸಬೇಕಾಗುತ್ತದೆ. ಗಡಿ ವಿಚಾರದಲ್ಲಿ ನಮ್ಮನ್ನು ಕೆಣಕಬೇಡಿ. ನಮ್ಮ ಒಂದಿಂಚೂ ಭೂಮಿ ಬಿಟ್ಟು ಕೊಡುವುದಿಲ್ಲ ಎಂದಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಕರ್ನಾಟಕದ ಒಂದಿಂಚೂ ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು.