ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ್ ರೆಡ್ಡಿ ಬಿಜೆಪಿ ಪಕ್ಷಕ್ಕೆ ಬೈ ಹೇಳಿದ್ದಾರೆ. ಇಂದು ತಮ್ಮ ಹೊಸ ಪಕ್ಷವನ್ನು ಘೋಷಿಸಿದ್ದಾರೆ. ‘ಕಲ್ಯಾಣ ರಾಜ್ಯ ಪ್ರಗತಿ’ ಎಂಬ ಹೆಸರಿನಲ್ಲಿ ಹೊಸ ಪಕ್ಷವನ್ನು ಘೋಷಿಸಿದ್ದಾರೆ.

ಹಲವು ವರ್ಷಗಳಿಂದ ಬಿಜೆಪಿ ತಮ್ಮನ್ನು ನಡೆಸಿಕೊಂಡಿರುವುದಕ್ಕೆ ಬೇಸತ್ತಿದ್ದೀನಿ. ಆ ಕಾರಣಕ್ಕೆ ಬಿಜೆಪಿಯಿಂದ ಹೊರಬಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಹುಟ್ಟು ಹಾಕಿದ್ದೀನಿ ಎಂದು ಹೇಳಿದರು.

ಶ್ರೀರಾಮುಲು ಹಾಗೂ ನಾನು ಒಳ್ಳೆಯ ಸ್ನೇಹಿತರು. ನಮ್ಮಿಬ್ಬರ ಮಧ್ಯೆ ಮನಸ್ತಾಪ ಇಲ್ಲ. ಬಳ್ಳಾರಿ ಜನತೆಯ ಸೇವೆಗೆ ಸದಾ ಸಿದ್ದ ಎಂದು ಪತ್ರಿಕಾಗೋಷ್ಠಿಯಲ್ಲಿ ಜನಾರ್ಧನ್ ರೆಡ್ಡಿ ತಿಳಿಸಿದರು.

ದಿವಂಗತ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಆಹ್ವಾನದ ಮೇರೆಗೆ ಬಿಜೆಪಿ ಸೇರಿದೆ‌. ಅವರನ್ನು ಗೆಲ್ಲಸಿಕೊಂಡು ಬಂದವಿ. ಬಳ್ಳಾರಿಯಲ್ಲಿ ಪಕ್ಷವನ್ನು ಸಹ ಬಲಪಡಿಸಲಾಯಿತು. ಬಿಜೆಪಿಯಿಂದ ಅಮಾನತ್ತಿನಲ್ಲಿದ್ದಾಗ ಸಿಎಂ ಬೊಮ್ಮಾಯಿ, ಈ ಹಿಂದೆ ನನ್ನನ್ನು ‘ಜೆಡಿಯು’ಗೆ ಆಹ್ವಾನಿಸಿದರು. ನಿತೀಶ್ ಕುಮಾರ್ ಜೊತೆ ಮಾತನಾಡಿದ್ದು, ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ ಎಂದು ಹೇಳಿದರು ಎಂದು ತಿಳಿಸಿದರು.

ಇಂದು ಭಾರತ ಕಂಡ ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ. ಎಲ್ಲರಿಗೂ ಕ್ರಿಸ್ಮಸ್ ಹಬ್ದದ ಶುಭಾಶಯಗಳು. ಬಸವಣ್ಣನವರ ‘ಕಾಯಕವೇ ಕೈಲಾಸ’ ತತ್ವ ನಂಬಿದವನು ನಾನು. ಶ್ರದ್ಧೆಯಿಂದ ಕೆಲಸ ಮಾಡಿಕೊಂಡು ಈವರೆಗೆ ಬಂದು ತಲುಪಿದ್ದೇನೆ. ಸತ್ಯದ ವಿಚಾರವನ್ನೇ ಹೇಳಿಕೊಂಡು ಬಂದಿದ್ದೇನೆ. ನನ್ನ 21ನೇ ವಯಸ್ಸಿನಲ್ಲಿ ಇನೋಬ್ಲಿಟಿ ಸಂಸ್ಥೆ ಆರಂಭಿಸಿದ್ದೆ. ನನ್ನ ಮೈನಿಂಗ್ ಕಂಪನಿಯಲ್ಲಿ ದೇವರು ಕೇಳಿಕೊಂಡಿದ್ದಕ್ಕೂ ಹೆಚ್ಚು ಕೊಟ್ಟಿದ್ದಾನೆ ಎಂದರು.

ಸುಷ್ಮಾ ಸ್ವರಾಜ್ ಅವರು ಬಳ್ಳಾರಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು.