ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(63) ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರನ್ನು ಇಂದು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ನಿರ್ಮಲಾ ಸೀತಾರಾಮನ್ ಆರೋಗ್ಯದ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದು ಬಂದಿಲ್ಲ. ಭಾನುವಾರ ನಡೆದ ‘ಸದೈವ್ ಅಟಲ್’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.