ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪಂಚಮಸಾಲಿ ಸಮುದಾಯಕ್ಕೆ 2D ಮೀಸಲಾತಿ ನೀಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾಧುಸ್ವಾಮಿ ಮಾತನಾಡಿದರು. ಹೊಸದಾಗಿ 2C ಹಾಗೂ 2D ಕೆಟಗರಿ ಮಾಡಲಾಗಿದ್ದು, 2A ಹಾಗೂ 2B ಅಲ್ಲಿ ಬದಲಾವಣೆ ಆಗುವುದಿಲ್ಲ ಎಂದು ತಿಳಿಸಿದರು.
ರಾಜ್ಯದ ಮತ್ತೊಂದು ಪ್ರಬಲ ಸಮುದಾಯ ಒಕ್ಕಲಿಗರಿಗೆ 2C ಕೆಟಗೆರಿ ಅಲ್ಲಿ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪಂಚಮಸಾಲಿ ಲಿಂಗಾಯತರಿಗೆ 2D ಕೆಟಗರಿ ಅಲ್ಲಿ ಮೀಸಲಾತಿ ನೀಡಲಾಗುವುದು
ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರು ಸಿಹಿ ಸುದ್ದಿ ಸಿಗಲಿದೆ ಎಂದು ಹೇಳಿದ್ದರು, ನಿರೀಕ್ಷೆಯಂತೆ ಸಿಹಿ ಸುದ್ದಿ ದೊರೆತಿದೆ.