ನವದೆಹಲಿ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ವೇಗಿ ಜಸ್ಪ್ರೀತ್ ಬುಮ್ರಾ ಔಟ್ ಆಗಿದ್ದಾರೆ. ಏಕದಿನ ಸರಣಿಗೂ ಮುನ್ನ ಗುವಾಹಟಿ ಅಲ್ಲಿ ಬುಮ್ರಾ ಭಾರತ ತಂಡವನ್ನು ಸೇರಿಕೊಳ್ಳಬೇಕಿತ್ತು.
ಗಾಯದಿಂದ ಚೇತರಿಸಿಕೊಳ್ಳಲು ಇನ್ನೂ ಕಾಲಾವಕಾಶ ಬೇಕಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹೊರ ಬಿಸಿಸಿಐ ಈ ಕ್ರಮ ಕೈಗೊಂಡಿದೆ. ಜನವರಿ 10 ರಂದು ಆತಿಥೇಯ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಆರಂಭವಾಗಲಿದೆ.
ಶ್ರೀಲಂಕಾ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ(ಉಪ ನಾಯಕ), ವಾಷಿಂಗ್ಟನ್ ಸುಂದರ್, ಯುಜುವೇಂದ್ರ್ ಚಹಾಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಆರ್ಷ್ ದೀಪ್ ಸಿಂಗ್.