ಬೆಳಗಾವಿ: ಆಟವಾಡುತ್ತಿದ್ದ 4 ವರ್ಷದ ಬಾಲಕರಿಬ್ಬರು ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಸವದತ್ತಿಯ ಗುರ್ಲಹೊಸೊರಿನಲ್ಲಿ ನಡೆದಿದೆ.

ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನದ ಕಟ್ಟಡದ ನೀರಿನ ಟ್ಯಾಂಕ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದಿದ್ದಾರೆ. ಮೃತರನ್ನು  ಶ್ಲೋಕ ಶಂಭುಲಿಂಗಪ್ಪ ಗುಡಿ (4), ಚಿದಾನಂದ ಪ್ರಕಾಶ ಸಾಲುಂಕೆ ( 4) ಎಂದು ಗುರುತಿಸಲಾಗಿದೆ.

ಸವದತ್ತಿ ಪೊಲೀಸ್ ಠಾಣೆಯ ಪೊಲೀಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕರಿಬ್ಬರ ಪಾಲಕರ ಆಕ್ರಂದನ ಮುಗಿಲು ಮುಟ್ಡಿತ್ತು.