ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಅಕ್ರಮವಾಗಿ ನಿರ್ಮಾಣವಾದ ಮಸೀದಿ ರಾಜಕೀಯ ಹಗ್ಗ ಜಗ್ಗಾಟಕ್ಕೆ ಕಾರಣವಾಗಿತ್ತು. ಬೆಳಗಾವಿ ಮಹಾನಗರ ಪಾಲಿಕೆ ಆ ಮಸೀದಿಗೆ ಈಗ ಕೀಲಿ ಹಾಕಿದೆ.
ಬೆಳಗಾವಿ ಸಾರಥಿ ನಗರದ ವಸತಿ ನಿವೇಶನದಲ್ಲಿ ಅಕ್ರಮವಾಗಿ ಫಾತೀಮಾ ಮಸೀದಿಯನ್ನು ನಿರ್ಮಾಣ ಮಾಡಲಾಗಿದೆ. ಈ ಬಗ್ಗೆ ಹಿಂದೂಪರ ಸಂಘಟನೆಗಳು, ಬಿಜೆಪಿ ಮಸೀದಿ ತೆರವುಗೊಳಿಸುವಂತೆ ಆಗ್ರಹಿಸಿದರು.
ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ಫಾತಿಮಾ ಮಸೀದಿಯಲ್ಲಿ ಧಾರ್ಮಿಕ ಚಟುವಟಿಕೆ ಸ್ಥಗಿತಗೊಳಿಸುವಂತೆ ನೋಟಿಸ್ ಜಾರಿ ಮಾಡಿತು.
ನೋಟಿಸ್ ಗೆ ಕ್ಯಾರೆ ಎನ್ನದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ ಅವರು, ವಕ್ಫ್ ಬೋರ್ಡ್‌ಗೆ ಕೂಡಲೇ ಮಸೀದಿಗೆ ಬೀಗ ಹಾಕುವಂತೆ ನೋಟಿಸ್ ನೀಡಿದ್ದಾರೆ.
ಪಾಲಿಕೆ ಆಯುಕ್ತರು ನೋಟಿಸ್ ನೀಡುತ್ತಿದ್ದಂತೆ ವಕ್ಫ್ ಕಮಿಟಿಯವರು ಮಸೀದಿಗೆ ಬೀಗ ಹಾಕಿದ್ದಾರೆ. ಮಸೀದಿ ಮುಂಭಾಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಒಂದು ಕೆಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ.