ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ ಸ್ಯಾಂಟ್ರೋ ‌ರವಿ‌ ಕೇಸ್ ಅನ್ನು‌ ಸಿಐಡಿಗೆ ವರ್ಗಾವಣೆ ಮಾಡುವಂತೆ ಸರ್ಕಾರ ಸೂಚನೆ‌ ನೀಡಿದೆ.

ಸ್ಯಾಂಟ್ರೋ ರವಿ ಕೇಸ್ ಸಿಐಡಿ ಗೆ ವರ್ಗಾಯಿಸುವಂತೆ ಪೊಲೀಸ್ ರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುಗಳ ಬಗ್ಗೆಯೂ ತನಿಖೆ ನಡೆಸುವಂತೆ ತಿಳಿಸಲಾಗಿದೆ. ಸದ್ಯ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಮೈಸೂರು ನಗರ ಪೊಲೀಸರು ನಡೆಸುತ್ತಿದ್ದಾರೆ.

ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರ ಮುಂದೆ ಸ್ಯಾಂಟ್ರೋ ರವಿ ಕೇಸ್ ಅನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು.

ನ್ಯಾಯಾಧೀಶರು, ಇದು ಸರ್ಕಾರದ ಕೆಲಸ. ನಾವು ಮಧ್ಯಪ್ರವೇಶಿಸುವುದಿಲ್ಲ ಎಂಬುದಾಗಿ ಹೇಳಿತ್ತು. ಈ ಬೆನ್ನಲ್ಲೇ ಗೃಹ ಇಲಾಖೆ ಸಚಿವರು ಸಿಐಡಿಗೆ ಪ್ರಕರಣ ವರ್ಗಾವಣೆ ನೀಡುವಂತೆ ನಿರ್ದೇಶಿಸಿದ್ದಾರೆ ಎನ್ನುಲಾಗುತ್ತಿದೆ.