ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ‌ನಡೆಸಿದೆ. ಬೆಂಗಳೂರಿನಲ್ಲಿ 50% ಭ್ರಷ್ಟಾಚಾರ ನಡಿದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಭ್ರಷ್ಟಾಚಾರ ವಿರುದ್ಧ ನಮ್ಮ ಹೋರಾಟ ನಿರಂತರ. ಹಾಗಾಗಿ ಬೆಂಗಳೂರಿನಲ್ಲಿ ನಮ್ಮ ಪ್ರತಿಭಟನೆ ನಡೆಯುತ್ತಿದೆ ಎಂದರು.

ಕಾಂಗ್ರೆಸ್ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ, ವಿರೋಧ ಪಕ್ಷದಲ್ಲಿ ಕುಳಿತ ಬಿಜೆಪಿಗರು ಏನು ಮಾಡುತ್ತಿದ್ದರು?. ಈಗ ಭ್ರಷ್ಟಾಚಾರ ನಡೆದಿಲ್ಲ ಎನ್ನುವುದಾದರೆ, ಕೆಂಪಣ್ಣ ಪ್ರಧಾನಿ ಅವರಿಗೆ ಏಕೆ ಪತ್ರ ಬರೆಯುತ್ತಿದ್ದರು ಎಂದು ಪ್ರಶ್ನಿಸಿದರು.