ಮಂಗಳೂರು; ಕಲುಷಿತ ಆಹಾರ ಸೇವಿಸಿ ಪ್ಯಾರಾ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜಿನ 100ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಸೋಮವಾರ ನಡೆದಿದೆ.
ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ ಶಕ್ತಿನಗರದ ಹಾಸ್ಟೇಲ್ ನಲ್ಲಿ ಭಾನುವಾರ ರಾತ್ರಿ ಆಹಾರ ಸೇವನೆ ನಾಡಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಸೋಮವಾರ ಬೆಳಗ್ಗೆಯಿಂದಲೇ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ನಗರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಕೇಂದ್ರ ಉಪವಿಭಾಗ ಎಸಿಪಿ ರಾಜೇಂದ್ರ ಕುಮಾರ್ ಭೇಟಿ ನೀಡಿದ್ದಾರೆ.