ಬೆಂಗಳೂರು: ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಫೆ.11 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರವರಿಗೆ ಸರ್ಕಾರಿ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜು ಆವರಣ, 18 ನೇ ಕ್ರಾಸ್, ಮಲ್ಲೇಶ್ವರಂ ಇಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಕಾಂ., ಬಿಬಿಎ., ಬಿಎ., ಬಿಸಿಎ., ಮತ್ತು ಬಿಇ ಯಾವುದೇ ಪದವಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು.

ಅಭ್ಯರ್ಥಿಗಳು http://skillconnect.kaushalkar.com/candidatereg ಲಿಂಕ್ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9964907444, 8105020115 ಅಥವಾ 9108347465 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.