ಕೇಪ್ ಟೌನ್: ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಟಿ-20 ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದೆ. ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 114 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಗುರಿ ಬೆನ್ನತ್ತಿದ್ದ ಪಾಕಿಸ್ತಾನ ‌ಮಹಿಳಾ ತಂಡ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿ ಸೋಲು ಕಂಡಿದೆ.

ಮಹಿಳಾ ಟಿ-20 ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ಮಹಿಳಾ ತಂಡ ಟಿ-20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಗಳಿಸಿ ದಾಖಲೆ ನಿರ್ಮಿಸಿದೆ. ಇಂಗ್ಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 213 ರನ್ ಹಾಕಿತು. ಈ ಮೂಲಕ ಮಹಿಳಾ ಟಿ-20 ವಿಶ್ವಕಪ್ ನಲ್ಲಿ ಅತ್ಯಧಿಕ ರನ್ ಕಲೆ ಹಾಕಿದ ತಂಡವಾಗಿ ಹೊರಹೊಮ್ಮಿದೆ. ಇದಕ್ಕೂ ಮುನ್ನ ಥಾಯ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ 195 ರನ್ ಕಲೆ ಹಾಕಿತು.