ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ.
ಭಾನುವಾರ ಮನೀಷ್ ಸಿಸೋಡಿಯಾ ಅವರನ್ನು ಸಿಬಿಐ ವಿಚಾರಣೆಗೆ ಕರೆದಿತ್ತು. ಈ ವೇಳೆ ಅವರನ್ನು ಬಂಧಿಸಿದ್ದಾರೆ. ಈ ಹಿಂದೆ ಸಿಬಿಐ ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು.
ಈ ಪ್ರಕರಣದಲ್ಲಿ ಮನೀಷ್ ಅಬಕಾರಿ ನೀತಿಯನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಕೆಲವು ಸೂಚನೆಗಳನ್ನು ನೀಡಿದ್ದರು ಎಂದು ಅವರು ಹೇಳಿದರು ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ.