ಬಳ್ಳಾರಿ: ಸಾರಿಗೆ ಸಂಸ್ಥೆ ಸಿಬ್ಬಂದಿ ಜೊತೆ ಮಾತುಕತೆ ನಡೆದಿದೆ. ಯಾವುದೇ ಕಾರಣಕ್ಕು ಅವರು ಮುಷ್ಕರ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆ ವಿಚಾರದಲ್ಲಿ ಮಾತುಜತೆ ನಡೆದಿದೆ. ಹಣಕಾಸಿನ ಇತಿಮಿತಿ ನೋಡಿಕೊಂಡು ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿತ್ತು. ಆದರೆ ಅವರು ಒಪ್ಪಿಕೊಂಡಿಲ್ಲ. ಇವತ್ತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದೆವೆ ಎಂದು ಸ್ಪಷ್ಟಪಡಿಸಿದರು.

ಹೀಗಾಗಿ ಸಾರಿಗೆ ಸಂಸ್ಥೆ ನೌಕರರ ಫೆಡರೇಶನ್ ಜೊತೆ ಮಾತನಾಡಲು ಎಂ.ಡಿ. ಅನ್ಬು ಕುಮಾರ್ ಅವರಿಗೆ ಮಾತಾಡಲು ಹೇಳಿದ್ದೆನೆ. ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ವೇತನ ಹೆಚ್ಚಳ ಮಾಡುವುದು ನಿಶ್ಚಿತ ಎಂದರು.