ಗದಗ: ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಶಿರಹಟ್ಟಿ ಶಾಸಕ ರಾಮಪ್ಪ ಲಮಾಣಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ.

ಧಾರ್ಮಿಕ ಕೇಂದ್ರದಲ್ಲಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಚಟುವಟಿಕೆ ಕೈಗೊಳ್ಳಬಾರದು ಎನ್ನುವ ನಿಯಮವಿದ್ದರೂ ಏಪ್ರಿಲ್ 6ರಂದು ಲಕ್ಷ್ಮೇಶ್ವರದ ಸೋಮೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಆಣೆ ಪ್ರಮಾಣ ಮಾಡಿರುವುದನ್ನು ಉಲ್ಲೇಖಿಸಿ ಪ್ರಕರಣ ದಾಖಲಿಸಲಾಗಿದೆ.

ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಶಾಸಕ ರಾಮಣ್ಣ ಲಮಾಣಿ, ಶಿರಹಟ್ಟಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ಡಾ. ಚಂದ್ರು ಲಮಾಣಿ, ಗುರುನಾಥ ದಾನಪ್ಪನವರ, ಭೀಮಸಿಂಗ್ ರಾಠೋಡ, ಗದಗ ಬೆಟಗೇರಿ ನಗರಸಭೆ ಪ್ರಥಮ ಪ್ರಜೆ ಉಷಾ ದಾಸರ ವಿರುದ್ಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.