ಬೀದರ್: ಇಬ್ಬರು ಮಕ್ಕಳೊಂದಿಗೆ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ನಡಿದಿದೆ.
ಆಟೋ ಚಾಲಕ ಅಂಕುಶ್ (28), ಪುತ್ರಿ ತನು (5) ಪುತ್ರ ಸಾಯಿರಾಜ್ (2) ಮೃತ ದುರ್ದೈವಿಗಳು. ಆತರಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಹುಮಮಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನ ಹೊರ ತೆಗೆದಿದ್ದಾರೆ.