ಗದಗ: ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರವೇ ರಾಜ್ಯ ಸರ್ಕಾರದ ನೆರವಿಗೆ ಬರಬೇಕಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸುವ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ಕುರಿತು ಕಾಂಗ್ರೆಸ್ ಪ್ರತಿಭಟನೆ ನಡೆಸಿರುವುದಕ್ಕೆ ಹರಿಹಾಯ್ದರು.
ಕಳೆದ 10 ವರ್ಷದಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ನೀಡಿದ ಎರಡು ಪಟ್ಟು ಬರಪರಿಹಾರ ಈಗಿನ ನರೇಂದ್ರ ಮೋದಿ ಸರ್ಕಾರ ಕೊಟ್ಟಿದೆ. ಕಾಂಗ್ರೆಸ್ ನವರು ಸರಿಯಾದ ಸಮಯಕ್ಕೆ ದಾಖಲೆಗಳನ್ನು ಕೊಡಲಾರದ್ದು ಇವರ ತಪ್ಪು ಎಂದರು.
ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಹೇಳಿದೆ. ಚುನಾವಣೆ ಆಯೋಗ ಪರವಾನಿಗೆ ಕೊಟ್ಟರೆ ಕರ್ನಾಟಕಕ್ಕೆ ಪರಿಹಾರ ಕೊಡುತ್ತೇವೆ ಎಂಬ ದೊಡ್ಡ ನಿರ್ಣಯವನ್ನು ಕೇಂದ್ರ ಸರ್ಕಾರ ಮಾಡಿದೆ. ಕೇಂದ್ರ ಸರ್ಕಾರ ಕೊಟ್ಟೆ ಕೊಡುತ್ತದೆ.
ಈ ಹಿಂದೆ ಪ್ರವಾಹ ಬಂದಾಗ ನಾವು ಕೇಂದ್ರದ ಅನುದಾನಕ್ಕಾಗಿ ಕಾಯಲಿಲ್ಲ. ನಮ್ಮ ರಾಜ್ಯದ ಬೊಕ್ಕಸದಿಂದ ರೈತರ ಸಹಾಯಕ್ಕೆ ಬಂದೆವು. ಅದೆ ರೀತಿ ಈಗಿನ ಕಾಂಗ್ರೆಸ್ ಸರ್ಕಾರ ಮಾಡಬಹುದಿತ್ತು, ಕೊನೆಗೂ ಮಾಡಲಿಲ್ಲ. ಕೊನೆಗೆ ಕೇಂದ್ರ ಸರ್ಕಾರವೇ ಇವರ ಸಹಾಯಕ್ಕೆ ಬರಬೇಕಾಯಿತು ಎಂದು ಹೇಳಿದರು.