ಕೊಪ್ಪಳ: ಇಲ್ಲಿಯ ಕಾಳಿದಾಸ ನಗರದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಶ್ರೀಕಾಂತ (45) ಮೃತಪಟ್ಟಿರುವ ವ್ಯಕ್ತಿಯಾಗಿದ್ದು, ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ಮೂಲಕ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ.

ಈ ವ್ಯಕ್ತಿ ಕಳೆದ 7 ವರ್ಷಗಳಿಂದ ಕಾಳಿದಾಸ ನಗರದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿದ್ದ‌
ಆದರೆ, ಮೃತ ಶ್ರೀಕಾಂತ ಅತಿಯಾಗಿ ಮದ್ಯ ವ್ಯಸನಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ನಾಲ್ಕು ದಿನಗಳಿಂದ ಮನೆಯ ಬಾಗಿಲು ತೆಗೆದಿರಲಿಲ್ಲ.

ಅತಿಯಾಗಿ ಮದ್ಯ ಸೇವಿಸಿ ಮಲಗಿದಲ್ಲಿಯೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ‌.
ಮನೆಯಿಂದ ಕೆಟ್ಟ ವಾಸನೆ ಬಂದ ಹಿನ್ನಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಬಂದ ಬಳಿಕ ಶುಕ್ರವಾರ ಬಾಗಿಲು ಒಡೆದು ತೆಗೆದಾಗ ಸಾವನ್ನಪ್ಪಿರೋದು ಬೆಳಕಿಗೆ ಬಂದಿದೆ.
ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ