ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿಸಿಇಟಿ) ಫಲಿತಾಂಶವನ್ನು ನಾಳೆ, ಅಂದರೆ ಶನಿವಾರ (ಮೇ 24) ಪ್ರಕಟಿಸಲಿದೆ.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಕೆಇಎ ಕಚೇರಿಯಲ್ಲಿ ಬೆಳಿಗ್ಗೆ 11:30ಕ್ಕೆ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಿಇಟಿ ಬರೆದ ವಿದ್ಯಾರ್ಥಿಗಳು ಮಧ್ಯಾಹ್ನ 2 ಗಂಟೆಯ ನಂತರ ಕೆಳಗೆ ನಮೂದಿಸಲಾದ ವೆಬ್ಸೈಟ್ಗಳಲ್ಲಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು.
https://cetonline.Karnataka.gov.in/ugcetrank2025/checkresult.aspx ಹಾಗೂ https://karresults.nic.in