ಬೆಂಗಳೂರು:  ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ (ಕೆಎನ್: 2000) ಅವರನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಬಡ್ತಿ ನೀಡಿ ಸರಕಾರ ಆದೇಶ ಹೊರಡಿಸಿದೆ. ಪ್ರಸ್ತುತ ನಿರ್ವಹಿಸುತ್ತಿರುವ ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ ನಿಯಮಿತ, ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕಿ ಹುದ್ದೆಯಲ್ಲಿಯೂ ಮುಂದುವರಿಯಲಿದ್ದಾರೆ.

ಸರ್ಕಾರದ ಆದೇಶ ಸಂಖ್ಯೆ: ಇ-ಡಿಪಿಎಆರ್ 219 ಎಸ್‌ಪಿಎಸ್ 2024, ದಿನಾಂಕ 31.05.2025 ರ ಪ್ರಕಾರ, ಶ್ರೀಮತಿ ರೂಪಾ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಐಪಿಎಸ್ (ವೇತನ) ನಿಯಮಗಳು, 2016 ರ ವೇತನ ಶ್ರೇಣಿಯ ಲೆವೆಲ್-15 ರಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಶ್ರೇಣಿಗೆ ಬಡ್ತಿ ನೀಡಲಾಗಿದೆ.

ಮುಂದಿನ ಆದೇಶದವರೆಗೆ ಅವರು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ.