ಧಾರವಾಡ : ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಜರುಗುವ ಕೃಷಿ ಮೇಳ 2025ಕ್ಕೆ “ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ” ಮತ್ತು “ಶ್ರೇಷ್ಠ ಕೃಷಿ ಮಹಿಳೆ” ಪ್ರಶಸ್ತಿಗೆ ಅರ್ಜಿ ಕರೆಯಲಾಗಿದೆ.
ಗದಗ ಜಿಲ್ಲೆಯ ಆಸಕ್ತ ರೈತ, ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ಕೃಷಿ ಸಂಶೋಧನಾ ಕೇಂದ್ರ, ಗದಗ ಅಥವಾ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಗದಗ ಈ ಕಛೇರಿಗಳಿಂದ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಜಮೀನಿನ ಉತಾರದೊಂದಿಗೆ ತಾಲ್ಲೂಕು ಮಟ್ಟದ ಕೃಷಿ ಅಧಿಕಾರಿಗಳ ಶಿಫಾರಸ್ಸಿನೊಂದಿಗೆ ದಿ. 31.07.2025 ರ ಒಳಗಾಗಿ ಕಛೇರಿಯ ವೇಳೆಯಲ್ಲಿ (ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 9.00 ರಿಂದ ಸಾಯಂಕಾಲ 5.00 ಗಂಟೆಯವರೆಗೆ ಹಾಗೂ ಶನಿವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ) ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ಕೃಷಿ ಸಂಶೋಧನಾ ಕೇಂದ್ರ, ಗದಗ ಇವರಿಗೆ ಸಲ್ಲಿಸಬಹುದಾಗಿದೆ.