ಬೆಳಗಾವಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು. ರಾಜ್ಯದಲ್ಲಿ ಕ್ರಿಕೆಟ್‌ನ ಅಭಿವೃದ್ಧಿ ಹಾಗೂ ಸಹಕಾರದ ಕುರಿತು ಪ್ರಮುಖ ಸಮಾಲೋಚನೆ ನಡೆಸಿದರು.


ಕೆಎಸ್‌ಸಿಎ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ವೆಂಕಟೇಶ್ ಪ್ರಸಾದ್ ಅವರ ಈ ಭೇಟಿ ಮಹತ್ವ ಪಡೆದಿದ್ದು, ರಾಜ್ಯಮಟ್ಟದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರದ ಬೆಂಬಲದ ಬಗ್ಗೆ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.

ರಮುಖರ ಸಮ್ಮುಖ:
ಈ ಸಂದರ್ಭದಲ್ಲಿ ಕೆಎಸ್‌ಸಿಎ ಪದಾಧಿಕಾರಿಗಳಾದ ಕಾರ್ಯದರ್ಶಿ ಸಂತೋಷ್ ಮೆನನ್, ಉಪಾಧ್ಯಕ್ಷ ಸುಜಿತ್ ಸೋಮಸುಂದರ್ ಹಾಗೂ ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಜಕೀಯ ನಾಯಕರಾದ ಬಿಡಿಎ ಅಧ್ಯಕ್ಷ ಮತ್ತು ಶಾಸಕ ಎನ್.ಎ. ಹ್ಯಾರಿಸ್, ಶಾಸಕ ಅಶೋಕ್ ಪಟ್ಟಣ ಮತ್ತು ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಸಹ ಈ ಸಭೆಯಲ್ಲಿ ಭಾಗವಹಿಸಿದ್ದರು.