ರಾಂಚಿ: ಜೆಡಿಯು ಪಕ್ಷದ ಮಾಜಿ ಅಧ್ಯಕ್ಷ ಶರದ್ ಯಾದವ್(75) ನಿಧನರಾಗಿದ್ದಾರೆ. ಗುರಗಾಂವ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಪುತ್ರಿ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಆಪ್ತರು ಹಾಗೂ ಕೇಂದ್ರದ ಮಾಜಿ ಸಚಿವರಾಗಿದ್ದರು.

ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯ ಬಾಬಾಯಿ ಗ್ರಾಮದಲ್ಲಿ 1 ಜುಲೈ 1947 ರಲ್ಲಿ ಜನಿಸಿದರು. 1974 ರಲ್ಲಿ ಮಧ್ಯ ಪ್ರದೇಶದ ಜಬಲ್ ಪುರ್ ಉಪ ಚುನಾವಣೆಯಲ್ಲಿ ಗೆದ್ದು ಲೋಕಸಭಾ ಪ್ರವೇಶಿಸಿದರು. ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಹವಾಲಾ ಹಗರಣದಲ್ಲಿ ಶರದ್ ಯಾದವ್ ಆರೋಪಿತರಾಗಿದ್ದರು. ಸುಪ್ರೀಂ ಕೋರ್ಟ್ ಆರೋಪವನ್ನು ವಜಾಗೊಳಿಸಿತು.