ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 19 ರಂದು ಕಲಬುರಗಿಗೆ ಆಗಮಿಸಲಿದ್ದಾರೆ.
ಮೋದಿ ಅವರು ಮಲ್ಖೇಡ್ ನಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ತಾಂಡಾಗಳ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಗೆ ಆಗಮಿಸಲಿರುವ ಹಿನ್ನಲೆಯಲ್ಲಿ ಕಾರ್ಯಕ್ರಮದ ಸಿದ್ದತೆಗಳು ಭರದಿಂದ ಸಾಗಿವೆ.
ಕಲ್ಯಾಣ ಕರ್ನಾಟಕ ಮತ್ತು ವಿಜಯಪುರ ಜಿಲ್ಲೆಯ 51,900 ಫಲಾನುಭವಿಗಳಿಗೆ ದಾಖಲೆ ಪತ್ರ ನೀಡಲಿದ್ದಾರೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಸೋಲು ಅನುಭವಿಸಿದರು. ಈಗ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಪಕ್ಷ ಸಂಘಟನೆಗೆ ಮೋದಿ ಅವರನ್ನು ಬಿಜೆಪಿ ನಾಯಕರು ರಾಜ್ಯಕ್ಕೆ ಆಗಮಿಸುವಂತೆ ಮಾಡಿದ್ದಾರೆ.