ಸಾಗರ: ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ, ಸಹಕಾರಿ ಧುರೀಣ ಎಲ್ ಟಿ ತಿಮ್ಮಪ್ಪ(94) ಮಂಗಳವಾರ ನಿಧನರಾದರು.

ಸಾಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್​ ನಿಂದ ಸ್ಪರ್ಧಿಸಿ ಗೆಲುವು ಕಂಡಿದ್ದರು. ಸಾಗರ ತಾಲೂಕಿನ ಮಡಸೂರು ಗ್ರಾಮದಲ್ಲಿ ಮಂಗಳವಾರ ಮುಂಜಾನೆ ವಿಧಿವಶರಾದರು.

ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ಸ್ಥಾಪನೆ ಸೇರಿದಂತೆ ಅಂತರರಾಜ್ಯ ಸಂಸ್ಥೆ ಕ್ಯಾಂಪ್ಕೋ, ಸಾಗರದ ಆಪ್ಸ್‌ ಕೋಸ್‌ ನಂತಹ ಸಂಸ್ಥೆ ನಿರ್ಮಾಣ ಮಾಡುವಲ್ಲಿ ತಿಮ್ಮಪ್ಪ ಅವರ ಪಾತ್ರ ಮಹತ್ವದು.