ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಹಾಗೂ ಸಿದ್ದರಾಮಯ್ಯ ಸ್ವತಃ ಸ್ಪಷ್ಟಪಡಿಸಿದರು.
ಬಾಗಲಕೋಟೆಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ, ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಈಗಾಗಲೇ ಅವರೇ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಒಂದೇ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಅಂತಿಮವಾಗಿ ಈ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ನಾನು ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಹೈಕಮಾಂಡ್ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಲು ಸೂಚಿಸುತ್ತದೆ ಆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.