ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹ ಸಹಾಯಕ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುನೀಲ್ ಡಿ.ಗಲ್ಲೆ ಅವರಿಗೆ ಸ್ವಾತಂತ್ರೋತ್ಸವದ 75 ನೇಯ ದಿನಾಚರಣೆಯ ಆಝಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರಪತಿಗಳ ಸುಧಾರಣಾ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಸುನೀಲ್ ಡಿ.ಗಲ್ಲೆ ಅವರು 1995 ರಲ್ಲಿ ಬೆಳಗಾವಿ ಕಾರಾಗೃಹ ಇಲಾಖೆಯಲ್ಲಿ ನೇಮಕಾತಿಗೊಂಡು ಕೇಂದ್ರ ಕಾರಾಗೃಹ 2002 ರಿಂದ ಬೆಂಗಳೂರು ಕೇಂದ್ರ ಕಾರಾಗೃಹ, 2009 ರಿಂದ ಮೈಸೂರು ಕೇಂದ್ರ ಕಾರಾಗೃಹ, 2012 ರಿಂದ ಮೈಸೂರಿನ ಕಾರಾಗೃಹಗಳ ಸಿಬ್ಬಂದಿ ತರಬೇತಿ ಸಂಸ್ಥೆಯಲ್ಲಿ, 2017 ರಿಂದ ಬೆಂಗಳೂರು ಕೇಂದ್ರ ಕಾರಾಗೃಹ ಹಾಗೂ 2019 ರಿಂದ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.