ಉಡುಪಿ: ಶ್ರೀ ರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸಚಿವ ಸುನಿಲ್ ಕುಮಾರ್ ವಿರುದ್ಧ ಮುತಾಲಿಕ್ ತೊಡೆ ತಟ್ಟಲಿದ್ದಾರೆ.
ಸಾವಿರಾರು ಕಾರ್ಯಕರ್ತರ ಒತ್ತಡದಿಂದ ನೋವಿನ ದನಿಯಾಗಿ ಪಕ್ಷೇತರವಾಗಿ ಸ್ಪರ್ಧಿಸಲು ತಯಾರಾಗಿದ್ದೀನಿ. 7 ರಿಂದ 8 ಬಾರಿ ಕ್ಷೇತ್ರ ಸುತ್ತಾಡಿದ್ದು, ಜನ ಬೆಂಬಲ ನೀಡಲಿದ್ದಾರೆ. ಇಲ್ಲಿ ಹಿಂದೂಗಳಿಗೆ ನೋವಾಗಿದೆ. ಹಿಂದುತ್ವ ಹಾಗೂ ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಹೇಳಿದರು.
ಇಂದು ಪ್ರಮೋದ್ ಮುತಾಲಿಕ್ ಅವರ ಜನ್ಮದಿನ. ಈ ದಿನವೇ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.