ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸೋತರೆ ವಿಸರ್ಜಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ನ ಹಲವರು ಈಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನೀವು ಬಂದು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಳೆದ ಕೆಲವು ದಿನಗಳ ಹಿಂದೆ ಈ ಭಾರಿ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರದಿದ್ದರೆ ಪಕ್ಷ ವಿಸರ್ಜಿಸುವುದಾಗಿ ಹೇಳಿಕೆ ನೀಡಿದ್ದರು.
ಜೆಡಿಎಸ್ ಪಕ್ಷದ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಸೇರಿಕೊಳ್ಳುತ್ತಿದ್ದಾರೆ. ನಾವು ಜೆಡಿಎಸ್ ಪಕ್ಷದ ಮುಖಂಡರಿಗೆ ಹೇಳುತ್ತಿದ್ದೀವಿ, ನೋಡಿ ನಿಮ್ಮ ಪಕ್ಷವನ್ನು ಕುಮಾರಸ್ವಾಮಿ ವಿಸರ್ಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಈಗಲೇ ಬಂದು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಆ ಪಕ್ಷದ ಮುಖಂಡರಿಗೆ ಆಹ್ವಾನ ನೀಡುತ್ತಿದ್ದೇವೆ ಎಂದರು.