ಚೆನ್ನೈ: ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಮುರಳಿ ವಿಜಯ್ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದರು.
ವಿಜಯ್ ಕಳೆದ ನಾಲ್ಕು ವರ್ಷಗಳಿಂದ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಆಡಿಲ್ಲ. ಕೊನೆಯ ಬಾರಿ 2018 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ಮೂರು ಮಾದರಿಯಲ್ಲಿ ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್ ನಲ್ಲಿ ಆಡಿದ್ದಾರೆ. ಇತ್ತೀಚೆಗೆ ಬಿಸಿಸಿಐ ವಿರುದ್ದ ಸಿಟ್ಟು ಹೊರ ಹಾಕಿದ್ದರು. ಇನ್ನೂ ಮೇಲೆ ವಿದೇಶಿ ಲೀಗ್ ಗಳಲ್ಲಿ ಆಡಬಹುದು.