ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದು ಕೇವಲ ವದಂತಿ ಎಂದು ಸಚಿವ ನಾರಾಯಣಗೌಡ ಹೇಳಿದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂಬುದಕ್ಕೆ ಸ್ವತಃ ಸಚಿವ ನಾರಾಯಣಗೌಡ ಅವರು ತೆರೆ ಎಳೆದಿದ್ದಾರೆ.
ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರ ಕುರಿತು ಹೇಳಿರುವ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ.
ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರ ಬಗ್ಗೆ ಉಲ್ಲೇಖಿಸಲಾಯಿತು, ಅಂದ ಮಾತ್ರಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂದಲ್ಲ. ನನಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಸಮಾನ ಎದುರಾಳಿಗಳು ಎಂದರು.
ಕೆ.ಆರ್. ಪೇಟೆ ಮತಕ್ಷೇತ್ರದಲ್ಲಿ ಕಮಲ ಅರಳಿಸುವ ಮೂಲಕ ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆದ ನನಗೆ ಪಕ್ಷ ಎಲ್ಲವನ್ನೂ ನೀಡಿದೆ.
ನಿಕಟಪೂರ್ವ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಎರಡ್ಮೂರು ಖಾತೆಗಳನ್ನು ನೀಡುವುದರ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನವನ್ನು ನೀಡಿದ್ದಾರೆ ಎಂದು ತಿಳಿಸಿದರು.