ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಸುಪುತ್ರ ಬಿ ವೈ ವಿಜಯೇಂದ್ರಗೆ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ.
ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನು ರಾಜ್ಯದಲ್ಲಿ ಕಡೆಗಣಿಸಲಾಗುತ್ತಿದೆ ಎನ್ನುವ ಸುದ್ದಿಯ ಮಧ್ಯೆ ವಿಜಯೇಂದ್ರ ಅವರಿಗೆ ಹೊಸ ಜವಾಬ್ದಾರಿ ನೀಡಿದ್ದು, ಲಿಂಗಾಯತ ಮತಗಳನ್ನು ಸೆಳೆಯಲು ಎಂಬುವ ಮಾತುಗಳು ಕೇಳಿ ಬಂದಿವೆ.
ಚುನಾವಣೆಯ ಪೂರ್ವಸಿದ್ಧತಾ ಕಾರ್ಯಕ್ರಮಗಳ ಜವಾಬ್ದಾರಿಯನ್ನು ಬಿಜೆಪಿ ಹಂಚಿಕೆ ಮಾಡಲಾಗಿದೆ. ನಾಲ್ಕು ತಂಡಗಳ ರಥಯಾತ್ರೆಗೂ ಮೂರು ಜನ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ಮೋರ್ಚಾಗಳ ಸಮಾವೇಶ ಆಯೋಜನೆ ಜವಾಬ್ದಾರಿಯನ್ನು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರ ತಂಡಕ್ಕೆ ನೀಡಲಾಗಿದೆ.
ಫಲಾನುಭವಿಗಳ ಸಮ್ಮೇಳನದ ಜವಾಬ್ದಾರಿಯನ್ನು ಸಚಿವ ಹಾಲಪ್ಪ ಆಚಾರ್ ಹಾಗೂ ಎಸ್.ಟಿ.ಸೋಮಶೇಖರ್ ತಂಡಕ್ಕೆ ನೀಡಲಾಗಿದೆ. ವಿಡಿಯೋ ವ್ಯಾನ್ ಪ್ರಚಾರದ ಜವಬ್ದಾರಿ ಎಸ್.ವಿ.ರಾಘವೇಂದ್ರ ತಂಡಕ್ಕೆ ನೀಡಲಾಗಿದೆ.
ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನದ ಉಸ್ತುವಾರಿ ಸಚಿವ ಕೆ ಸುಧಾಕರ್ ಹಾಗೂ ಬಿಸಿ ನಾಗೇಶ್ ತಂಡಕ್ಕೆ ನೀಡಲಾಗಿದೆ. ನಾಲ್ಕು ಭಾಗಗಳಲ್ಲಿ ನಾಲ್ಕು ತಂಡಗಳಾಗಿ ರಥಯಾತ್ರೆ ಸಂಚಾಲಕರನ್ನು ನೇಮಿಸಲಾಗಿದೆ.