ಬೆಂಗಳೂರು: ಮಾಜಿ ಸ್ಪೀಕರ್‌ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ(69) ಅವರು‌ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕಳೆದ 2 ತಿಂಗಳಿನಿಂದ ವಿಜಯಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ವಿಜಯಮ್ಮ ಅವರನ್ನು 2 ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದರು. ಮೃತರು ಪತಿ, ಪುತ್ರಿ, ಪುತ್ರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.