ಕೇಪ್ ಟೌನ್: ಮಹಿಳಾ ಟಿ-20 ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ತಂಡ ಆರನೇ ಬಾರಿಗೆ ವಿಶ್ವಕಪ್ ಜಯಿಸಿದೆ. ಭಾನುವಾರ ನಡೆದ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವನಿತೆಯರು 19 ರನ್ ಗಳ ಗೆಲುವು ಸಾಧಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಕಲೆ ಹಾಕಿತು. ಟಾರ್ಗೆಟ್ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ 6 ವಿಕೆಟ್ 137 ರನ್ ಗಳಿಸಲಷ್ಟೇ ಶಕ್ತವಾಯಿತು.
ದಕ್ಷಿಣ ಆಫ್ರಿಕಾ ಮಹಿಳಾ ತಂಡದ ಚೊಚ್ಚಲ ಟಿ-20 ವಿಶ್ವಕಪ್ ಗೆಲ್ಲುವ ಕನಸು ನುಚ್ಚು ನೂರಾಯಿತು.