ಹುಬ್ಬಳ್ಳಿ: 7ನೆ ವೇತನ ಆಯೋಗ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದು, ವರದಿ ಬಂದ ತಕ್ಷಣ ಅದನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಜೆಟ್ ನಲ್ಲಿ ಏಳನೇ ವೇತನ ಆಯೋಗದ ವರದಿ ಜಾರಿಗೆ ಅನುದಾನ ಮೀಸಲಿರಿಸಲಾಗಿದೆ. ನೌಕರರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಅಮಿತ್ ಶಾ ಚುನಾವಣೆ ಏಜೆಂಟ್ ಎಂದು ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಮಾಜಿ ಸಿಎಂ ಈ ರೀತಿ ಮಾತಾಡುವುದು ಸರಿಯಲ್ಲ ಎಂದರು.