ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ ಸಾಧು ಕೋಕಿಲ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಸಾಧುಕೋಕಿಲ ಅವರಿಗೆ ಕಾಂಗ್ರೆಸ್ ಮಹತ್ವದ ಜವಾಬ್ದಾರಿ ನೀಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಕುರಿತಂತೆ ಆದೇಶ ಹೊರಡಿಸಿದ್ದು, ಪ್ರದೇಶ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮತ್ತು ರಾಜ್ಯ ನಾಯಕರ ಸಹಕಾರದೊಂದಿಗೆ ಸಾಂಸ್ಕೃತಿಕ ಘಟಕದ ಸಂಘಟನೆ ಹಾಗೂ ಆ ಮೂಲಕ ಪಕ್ಷದ ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ.