ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಹಿಂಸಾಚಾರಕ್ಕೆ 12 ಜನ ಬಲಿಯಾಗಿದ್ದಾರೆ. ದುಷ್ಕರ್ಮಿಗಳು ಮತಪೆಟ್ಟಿಗೆಯನ್ನೂ ಹೊತ್ತೊಯ್ದಿದ್ದಾರೆ.
ಮುರ್ಷಿದಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹಿಂಸಾಚಾರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟವೂ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು ಬಹಿರಂಗವಾಗಿಯೇ ನಾಡ ಬಂದೂಕು, ಬಾಂಬ್ ಹಿಡಿದು ದಾಳಿ ನಡೆಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.